ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿ0ದ ರಸ್ತೆ ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಇದಕ್ಕೆ ಅಧಿಕಾರಿಗಳ ಬೇಜಾಬ್ದಾರಿಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ರು, ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಮಾತನಾಡಿ, ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿ ಕುಚ್ಚೂರು ಕಂಚರ್ಕಳ ಎಂಬಲ್ಲಿ ಕಿರು ಸೇತುವೆ ಸಿಥಿಲಗೊಂಡಿದೆ. ಇಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಸಂಪರ್ಕ ಕಡಿತಗೊಳ್ಳುತ್ತಿದ್ದು, ಇದರ ವಿರುದ್ಧ ನಿರಂತರ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಈ ಬಾರಿ ಸರಕಾರ ನೂತನ ಸೇತುವೆಗೆ ಸುಮಾರು 2ಕೋಟಿ ರೂ.ಅನುದಾನ ಬಿಡುಗಡೆ ಮಾಡಿತ್ತು ಎಂದರು. ಈ ಕಾಮಗಾರಿಯನ್ನು ಮಳೆಗಾಲದಲ್ಲಿ ಆರಂಭಿಸಿದ ಪರಿಣಾಮ ನಿರಂತರವಾಗಿ ಸುರಿದ ಭಾರೀ ಮಳೆಗೆ ಈ ಬದಲಿ ರಸ್ತೆ ಕೊಚ್ಚಿಕೊಂಡು ಹೋಗಿದೆ. ಈ ಬಗ್ಗೆ ಕಳೆದ 9 ತಿಂಗಳ ಹಿಂದೆ ಸಂಬ0ಧಪಟ್ಟ ಅಧಿಕಾರಿ ಗಳ ಗಮನ ತಂದು ಮಳೆಗಾಲ ಮೊದಲೇ ಕಾಮಗಾರಿ ನಡೆಸುವಂತೆ ತಿಳಿಸಲಾಗಿದೆ. ಸಂಬ0ಧ ಪಟ್ಟ ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಸುಮಾರು 10 ಗ್ರಾಮದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ದೂರಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಿಥನ್, ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ, ಯಾರಿಗೂ ತೊಂದರೆ ಆಗದಂತೆ ಬದಲಿ ರಸ್ತೆಯನ್ನು ಎರಡು ದಿನಗಳಲ್ಲಿ ದುರಸ್ತಿ ಮಾಡಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ್ರು.



