ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಇಲಾಖಾಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿ0ದ ರಸ್ತೆ ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಇದಕ್ಕೆ ಅಧಿಕಾರಿಗಳ ಬೇಜಾಬ್ದಾರಿಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ರು, ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಮಾತನಾಡಿ, ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿ ಕುಚ್ಚೂರು ಕಂಚರ್ಕಳ ಎಂಬಲ್ಲಿ ಕಿರು ಸೇತುವೆ ಸಿಥಿಲಗೊಂಡಿದೆ. ಇಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಸಂಪರ್ಕ ಕಡಿತಗೊಳ್ಳುತ್ತಿದ್ದು, ಇದರ ವಿರುದ್ಧ ನಿರಂತರ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಈ ಬಾರಿ ಸರಕಾರ ನೂತನ ಸೇತುವೆಗೆ ಸುಮಾರು 2ಕೋಟಿ ರೂ.ಅನುದಾನ ಬಿಡುಗಡೆ ಮಾಡಿತ್ತು ಎಂದರು. ಈ ಕಾಮಗಾರಿಯನ್ನು ಮಳೆಗಾಲದಲ್ಲಿ ಆರಂಭಿಸಿದ ಪರಿಣಾಮ ನಿರಂತರವಾಗಿ ಸುರಿದ ಭಾರೀ ಮಳೆಗೆ ಈ ಬದಲಿ ರಸ್ತೆ ಕೊಚ್ಚಿಕೊಂಡು ಹೋಗಿದೆ. ಈ ಬಗ್ಗೆ ಕಳೆದ 9 ತಿಂಗಳ ಹಿಂದೆ ಸಂಬ0ಧಪಟ್ಟ ಅಧಿಕಾರಿ ಗಳ ಗಮನ ತಂದು ಮಳೆಗಾಲ ಮೊದಲೇ ಕಾಮಗಾರಿ ನಡೆಸುವಂತೆ ತಿಳಿಸಲಾಗಿದೆ. ಸಂಬ0ಧ ಪಟ್ಟ ಅಧಿಕಾರಿಗಳ ನಿರ್ಲಕ್ಷದ ಪರಿಣಾಮ ಸುಮಾರು 10 ಗ್ರಾಮದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ದೂರಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಿಥನ್, ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ, ಯಾರಿಗೂ ತೊಂದರೆ ಆಗದಂತೆ ಬದಲಿ ರಸ್ತೆಯನ್ನು ಎರಡು ದಿನಗಳಲ್ಲಿ ದುರಸ್ತಿ ಮಾಡಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!