ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ.
ಮೃತರನ್ನು ಕೊಂಚಾಡಿಯ ಓಂಶ್ರೀ ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದು, ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ.
ಕಾರು ಸಂಪೂರ್ಣವಾಗಿ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಕೂಡ ಚಿಂದಿಯಾಗಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…