ಕೆಲದಿನಗಳ ಹಿಂದೆ ಬಂಟ್ವಾಳ ತಹಶೀಲ್ದಾರ್ ರವರುಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಪಾಣೆ ಮಂಗಳೂರು ಹಳೆ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಭಂದಿಸಿ ಧಿಡೀರ್ ಆಗಿ ಹೊರಡಿಸಿದ ಆದೇಶದ ಬಗ್ಗೆ ಸಾರ್ವಜನಿಕರು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕರಿಗಾಗುವ ತೊಂದರೆಯ ಬಗ್ಗೆ ಪ್ರತಿಭಟನೆ ನಡೆಸಿದ್ದರು.
ನಂತರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಗಂಭೀರವಾದ ಚರ್ಚೆ ನಡೆದು ಸೇತುವೆ ಸಂಚಾರವನ್ನು ನಿರ್ಭಂದಿಸಿ ತಹಶೀಲ್ದಾರ್ ರವರು ಹೊರಡಿಸಿದ ಆದೇಶದ ವಿರುದ್ಧ ಜಿಲ್ಲಾಧಿಕಾರಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು. ಈದಿನ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕೂಡಾ ಉಪಸ್ಥಿತರಿದ್ದು ಈ ವಿಷಯದ ಬಗ್ಗೆ ಚರ್ಚೆ ನಡೆದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಸೇತುವೆಯ ಸಾಮರ್ಥ್ಯ ಪರೀಕ್ಷೆ ವರದಿ ಬರುವ ತನಕ ಲಘು ವಾಹನಗಳನ್ನು ಎಂದಿನಂತೆ ಸಂಚರಿಸಲು ಉಸ್ತುವಾರಿ ಸಚಿವರು ಆದೇಶಿಸಿದರು. ಸಭೆಗೆ ಮುಂಚಿತವಾಗಿ ಉಸ್ತುವಾರಿ ಸಚಿವರನ್ನು ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ಧಿಕ್ ಗುಡ್ಡೆಯಂಗಡಿಯವರ ನೇತೃತ್ವದ ನಿಯೋಗವು ಭೇಟಿಯಾಗಿ ವಾಸ್ತವ ವಿಚಾರಗಳನ್ನು ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿದ್ದರು. ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಅಬ್ದುಲ್ ಖಾದರ್ ಬಂಗ್ಲಗುಡ್ಡೆ, ಖಾಲಿದ್ ಬೋಗೋಡಿ, ಅಬ್ದುಲ್ ಮುತ್ತಲಿಬ್ ಹಾಗೂ ಇನ್ನಿತರರು ನಿಯೋಗದಲ್ಲಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…