ಮೂಲತಃ ಕೊಂಬಾರು ನಿವಾಸಿಯಾಗಿದ್ದು ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ಪ್ರಭಾಕರನ್ ಅವರು ಒಂದು ವರ್ಷದ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿ ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು.

ಪ್ರಸ್ತುತ ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ಕಡಬದ ಕಳಾರ ಬಳಿ ಅವರು ಜಾಗ ಖರೀದಿಸಿ ಮನೆ ನಿರ್ಮಿಸಿದ್ದು ವಾರದ ಹಿಂದೆಯಷ್ಟೇ ಗೃಹ ಪ್ರವೇಶ ಸಮಾರಂಭ ಕೂಡ ನಡೆದಿತ್ತು. ಜೂ.18ರಂದು ಸಂಜೆ ಕಾರಿನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದ ಅವರು ಆಸ್ಪತ್ರೆಯೊಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.



