ನೆಕ್ಕಿಲಾಡಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಮೊಸಳೆ ನೋಡಲು ಹೋದವರನ್ನು ಕಂಡು ಮೊಸಳೆಯು ಶಬ್ದಗೈದು ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ನಡೆದಿದೆ.
ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯ ನಿವಾಸಿಗಳಾದ ಆಝೀಝ್ ಪಿ.ಟಿ. ಹಾಗೂ ಇತರರಲ್ಲಿ ತಿಳಿಸಿದ್ದು, ಅವರು ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳೆಯು ಬಾಯಗಳಿಸಿ ಶಬ್ದ ಮಾಡಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು, ಮತ್ತೆ ನದಿ ನೀರಿಗೆ ಇಳಿದು ನಾಪತ್ತೆಯಾಗಿದೆ. ಎರಡು ವರ್ಷಗಳ ಹಿಂದೆ ಪಂಜಳದ ನೇತ್ರಾವತಿ ನದಿಯಲ್ಲಿಯೂ ದೊಡ್ಡ ಮೊಸಳೆಗಳೆರಡು ಪ್ರತ್ಯಕ್ಷವಾಗಿದ್ದವು. ಕಳೆದ ವರ್ಷ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ಬಳಿಯೂ ನೇತ್ರಾವತಿ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿತ್ತು. ನದಿಯಲ್ಲಿ ಮೊಸಳೆಯಿರುವುದು ನದಿಗೆ ಮೀನು ಬೇಟೆಗೆಂದು ಹೋಗುವವರಲ್ಲಿ ಆತಂಕ ಸೃಷ್ಟಿಸಿದೆ. ಒಂದೆಡೆ ನದಿಯಲ್ಲಿ ಮೊಸಳೆಯು ಕಾಣಿಸಿಕೊಂಡರೆ ಕೆಲವು ದಿನಗಳ ಹಿಂದೆ ನದಿಯಲ್ಲಿ ನೀರು ಕಡಿಮೆ ಇದ್ದ ಸಂದರ್ಭ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿಯ ನೇತ್ರಾವತಿ ನದಿಯಲ್ಲಿ ಕಡವಿನ ಬಾಗಿಲ ಸಮೀಪ ಸುಮಾರು 10ರಷ್ಟಿದ್ದ ನೀರು ನಾಯಿಗಳ ಹಿಂಡು ಕಾಣಿಸಿಕೊಂಡಿತ್ತು ಎಂದು ಉಪ್ಪಿನಂಗಡಿಯ ಪ್ರವಾಹ ರಕ್ಷಣಾ ತಂಡದ ನೇತೃತ್ವ ವಹಿಸಿರುವ ಗೃಹ ರಕ್ಷಕದಳದ ಸಿಬ್ಬಂದಿ ದಿನೇಶ್ ಬಿ. ತಿಳಿಸಿದ್ದಾರೆ. ಕಳೆದೆರಡು ವರ್ಷಗಳ ಹಿಂದೆ ಸರಕಾರದ ವತಿಯಿಂದ ನದಿಗೆ ಮೀನಿನ ಮರಿಗಳನ್ನು ಹಾಕಲಾಗಿದ್ದು, ಅವುಗಳು ಈಗ ಬೆಳೆದು ದೊಡ್ಡದಾಗಿವೆ. ಮೀನು ಹೇರಳವಾಗಿರುವ ಕಾರಣ ಇದೀಗ ನೀರು ನಾಯಿಗಳು ಅದರ ಬೇಟೆಗೆ ನದಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…