ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.
ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು ಹಾಗೂ ಸುರಕ್ಷಾ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…