ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ ರಾತ್ರಿ ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಮಂಗಳೂರಿಗೆ ಆಗಮಸಿರುವ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು, ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ಕಡಬಕ್ಕೆ ಬಂದಿದ್ದಾರೆ. ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಗೆ ಸರಕಾರ ನೇಮಿಸಿದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರ ಸೂಚನೆ ಮೇರೆಗೆ ಪೊಲೀಸರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮಾಹಿತಿಯನ್ನು ಸಂಗ್ರಹಿಸಲು ಪ್ರಾರಂಭಿಸಿದ್ದರು. ರಾತ್ರಿ ವೇಳೆ ಕಡಬದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡವರ ಮನೆಗೆ ತೆರಳಿ ಜಿ.ಪಿಎಸ್ ಫೋಟೋ ತೆಗದುಕೊಂಡು ಹೋಗಿದ್ದರು. ಇದನ್ನು ವಿರೋಧಿಸಿದ್ದ ಇಲ್ಲಿನ ಹಿಂದೂ ಮುಖಂಡರು ಪೋಲೀಸರ ನಡೆಯಿಂದ ಹಿಂದೂ ಕಾರ್ಯಕರ್ತರ ಮನೆಯಲ್ಲಿ ಆತಂಕ ಸೃಷ್ಠಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ನಡೆದ ಬೆಳವಣಿಗೆಲ್ಲಿ ಕಡಬ ಠಾಣೆಗೆ ತೆರಳಿದ್ದ ಹಿಂದೂ ಕಾರ್ಯಕರ್ತರು ಪೋಲೀಸರ ನಡೆಯನ್ನು ಖಂಡಿಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಸಲ್ಲಿಸಿದ್ದರು. ಮರುದಿನ ಠಾಣೆಯ ಮುಂದೆ ಜಮಾಯಿಸಿದ್ದು ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆ ಕಡಬ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದರು. ಇದರ ಬೆನ್ನಿಗೆ ಜಿಲ್ಲೆಯಲ್ಲಿ ಹಲವರಿಗೆ ಜಿಲ್ಲೆಯಿಂದ ಗಡಿಪಾರು ಆದೇಶದ ನೋಟೀಸು ನೀಡಲಾಗಿತ್ತು. ಈ ಎರಡೂ ವಿಚಾರಗಳನ್ನು ಖಂಡಿಸಿ ಕಡಬ ಠಾಣೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರಿವಾರ ಸಂಘಟನೆಯವರು ಪ್ರತಿಭಟನೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕೂಡಾ ದ್ವೇಷದ ಭಾಷಣದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ನವೀನ್ ನೆರಿಯಾ ವಿರದ್ಧ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಹಿಂದೂಗಳ ಮೇಲೆ ಸರಕಾರ ಪ್ರೇರಿತ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಸರಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದ ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕಡಬದ ವಿಶ್ವಹಿಂದೂ ಪರಿಷತ್ ಮುಖಂಡರೊಬ್ಬರ ಮನೆಯಲ್ಲಿ ಹಿಂದೂ ಕಾರ್ಯಕರ್ತರೊಂದಿಗೆ ಮಾನವ ಹಕ್ಕು ಆಯೋಗದ ಡಿವೈಎಸ್.ಪಿ ಮನಿಂದರ್ ಗಿಲ್ ನೇತೃತ್ವದ ಅಧಿಕಾರಿಗಳ ತಂಡ ಚರ್ಚೆ ನಡೆಸಿದೆ. ಹಿಂದೂ ಕಾರ್ಯಕರ್ತರಲ್ಲಿ ಪೊಲೀಸರು ಯಾವ ಹೊತ್ತಿಗೆ ಮನೆಗೆ ಬಂದಿದ್ದಾರೆ, ಯಾವ ರೀತಿಯ ವರ್ತನೆ ಮಾಡಿದ್ದಾರೆ. ಏನೆಲ್ಲಾ ಮಾಡಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ|ಕೃಷ್ಣ ಪ್ರಸಾದ್, ಕಡಬ ಪ್ರಖಂಡದ ಪ್ರಮುಖರಾದ ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ರೈ, ಜಂಯತ್ ಕಲ್ಲುಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…