ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ನಗರದಲ್ಲಿ ಅಪಾಯ ಆಹ್ವಾನಿಸುತ್ತಿರುವ ಅನುಪಯುಕ್ತ ಸಿಗ್ನಲ್ ಕಂಬಗಳು!

ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್‌ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು.

ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು ಬಳಿಕ ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದ್ದವು. ಸದ್ಯ ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ. ಹಳೆ ತಾಲೂಕು ಕಛೇರಿ ಬಳಿ ಇರುವ, ಕೆನರಾ ಬ್ಯಾಂಕ್ ಎದುರಲ್ಲಿಯೂ ಸಿಗ್ನಲ್ ಕಂಬವೊ0ದು ತುಂಡಾಗಿದ್ದು, ವಾಹನಗಳ, ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಕಂಡುಬ0ದಿದೆ. ಹಳೆ ಡಯಾನಾ ಸರ್ಕಲ್ ಬಳಿಯ ಪಾದಚಾರಿ ರಸ್ತೆಯ ಮೇಲೆ ಕೆಲವು ವರ್ಷಗಳಿಂದ ಸಿಗ್ನಲ್ ಕಂಬಗಳು ಇಡಲಾಗಿದೆ. ಈಗ ಆ ಕಂಬಗಳ ಸುತ್ತಲು ಗಿಡ ಗಂಟಿ ಬೆಳೆದುನಿಂತಿದ್ದು, ವಿಷ ಜಂತುಗಳಿಗೆ ಆಶ್ರಯವಾದಂತಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!