ಸೆಪ್ಟಂಬರ್ 27ರಂದು ಮರೋಳಿ ಜೋಡುಕಟ್ಟೆಯ ಸಮಾಜ ಸೇವಾ ಪ್ರತಿಷ್ಠಾನದ ಆವರಣದ ವಜ್ರಕಾಯ ರಂಗ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಸ್ವಾತಂತ್ರöಪೂರ್ವದಲ್ಲಿ ಜನರಲ್ಲಿ ಒಗ್ಗಟ್ಟು ಮೂಡಿಸಲು ಬಾಲಗಂಗಾಧರ ತಿಲಕ್ ಅವರ ಚಿಂತನೆಯಲ್ಲಿ ಮೂಡಿಬಂದಂತಹ ಸಾರ್ವಜನಿಕ ಶ್ರೀಗಣೇಶೋತ್ಸವ ಅಂದು ಬಹಳ ಮಹತ್ವವನ್ನು ಪಡೆದುಕೊಂಡಿತ್ತು. ಇದೇ ಹಾದಿಯಲ್ಲಿ ಸಾಗಿರುವ ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧಾರ್ಮಿಕ ಚಿಂತನೆಯನ್ನಿರಿಸಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವಾ ಪ್ರತಿಷ್ಠಾನ ಬರಿಯ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡದ್ದು ಮಾತ್ರವಲ್ಲದೆ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕೆ ಕೆಂಬಾರ್. ಕೋಶಾಧಿಕಾರಿ ಹರೀಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಗುಡ್ಡೆ ಗುತ್ತು ಗಣೇಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ. ನಿಕಟಪೂರ್ವ ಕಾರ್ಪೊರೇಟರ್ ಕೇಶವ ಮರೋಳಿ, ಜಯರಾಂ ಮರೋಳಿ, ರೋಹಿತಾಕ್ಷ ಮರೋಳಿ, ಜ್ಯೋತಿ ಕುಮಾರ್, ರತನ್ ಶೆಟ್ಟಿ ಕಂಕನಾಡಿ, ನವೀನ್ ಪ್ರಭು, ಆಶಾ ರಾಜೀವ್, ಪ್ರಶಾಂತ್ ಮರೋಳಿ, ಕಿಶೋರ್ ಶೆಟ್ಟಿ ಸೂರ್ಯನಗರ, ಭವಾನಿ ಶಂಕರ್ ಮರೋಳಿ, ಸರಳ ಎಸ್, ರಾಘವೇಂದ್ರ ಶೆಟ್ಟಿ, ತುಷಾರ್ ಎ. ಕೆಂಬಾರ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…