ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್‌ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದಾಗಿ ಅನೇಕ ಕಡೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಪ್ರತೀ ವಾರ್ಡ್ಗೆ 10 ಮನೆಗಳಂತೆ 60 ವಾರ್ಡಿನ ಮನೆಗಳಿಗೂ ತುರ್ತು ದುರಸ್ತಿಗೆ ಸಹಾಯವಾಗುವಂತೆ 40 ಸಾವಿರದವರೆಗೆ ಪರಿಹಾರ ಧನ ನೀಡುವ ನಿರ್ಣಯ ಕೈಗೊಂಡು ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ ಇದೀಗ ಬಿಜೆಪಿ ಆಡಳಿತದ ಅವಧಿ ಅಂತ್ಯವಾಗಿದ್ದು, ಪಾಲಿಕೆಯು ಜಿಲ್ಲಾಡಳಿತದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಕಾರಣ ಪರಿಹಾರ ಧನ ಯಾರಿಗೂ ಸಿಗದಿರುವುದು ಅಕ್ಷಮ್ಯ. ಈ ಹಿಂದಿನ ಕೌನ್ಸಿಲ್ ನ ನಿರ್ಣಯವನ್ನು ತಡೆ ಹಿಡಿಯಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿಯು ಈ ಹಿಂದೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಈಗಿನ ಆಡಳಿತ ವ್ಯವಸ್ಥೆ ಸಮರ್ಪಕವಾಗಿ ಬಳಸದೇ ಜನಸಾಮಾನ್ಯರಿಗೆ ಅನ್ಯಾಯ ಎಸಗುತ್ತಿದೆ ಎಂದು ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…