ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ. ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ ಕುಮಾರ್ ಬಹಳ ಚಂದದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.



