ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪರಿಶಿಷ್ಟ ಪಂ.ದ ಮಹಿಳೆಗೆ ಅನ್ಯಾಯ..!! ನ್ಯಾಯಕ್ಕಾಗಿ ಬೇಡಿಕೆ..?

ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ.

15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ ಆಡಳಿತ ವ್ಯವಸ್ಥೆಯೇ ಹೊಣೆಯಾಗುತ್ತದೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಸಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ ನೀರಕಜೆ ಎಂಬಲ್ಲಿ ವಾಸ್ತವ್ಯ ಹೊಂದಿರುವ ಚೆನ್ನಪ್ಪ ಎಂಬವರ ಪತ್ನಿ ಸರ್ವೆ ಬಂಬರ್ 98/2 ಎರಲ್ಲಿ 1.98 ಎಕ್ರೆ ಜಮೀನು ಹೊಂದಿದ್ದಾರೆ. ಇದು 1970-71 ದರ್ಖಾಸ್ತು ಮಂಜೂರಾದ ಜಾಗವಾಗಿದ್ದು, ಇದರಲ್ಲಿ 25 ವರ್ಷಗಳ ಹಿಂದೆ ಮನೆ ಕಟ್ಟಿದ್ದಾರೆ. ಇವರ ಮನೆಗೆ ಬರುವಲ್ಲಿ 0.46 ಎಕ್ರೆ ಸರಕಾರಿ ಜಮೀನು ಇದ್ದು, ಸರಕಾರಿ ಜಾಗವಾಗಿದ್ದರೂ ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಅವಕಾಶ ನೀಡದೆ ಅನಧಿಕೃತವಾಗಿ ಸ್ವಾಧೀನ ಮಾಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!