ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ.
ಮೃತರ ಮಗ ಈಶ ನಾಯಕ್(26) ಕೊಲೆ ಮಾಡಿದ ಆರೋಪಿ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್ಲೈನ್ ಮೂಲಕ ಹಣ ಕಳುಹಿಸಿದ್ದರು. ಜೂ.19ರಂದು ಬೆಳಗ್ಗೆ ಶಿಲ್ಪಾರಿಗೆ ಕರೆ ಮಾಡಿದ ಈಶಾ, ತಾಯಿ ಬೆಳಿಗ್ಗೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದನು. ಹಾಗೆ ಶಿಲ್ಪಾ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಕೆಂಪಾಗಿದ್ದು ಕುತ್ತಿಗೆಯನ್ನು ಒತ್ತಿದ ರೀತಿ ಕಂಡುಬಂದಿದೆ. ಅವರ ಮರಣದಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜೂ.21ರಂದು ಮಣಿಪಾಲ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರು ನೀಡಿದ ವರದಿಯಲ್ಲಿ ಪದ್ಮಾಬಾಯಿ ಅವರನ್ನು ಯಾರೋ ದುಷ್ಕರ್ಮಿಗಳು ಜೂ.18ರಂದು ರಾತ್ರಿಯಿಂದ ಜೂ.19ರ ಬೆಳಗಿನ ನಡುವೆ ಕೊಲೆ ಮಾಡಿರುವುದಾಗಿ ದೃಢಪಟ್ಟಿದೆ. ಅದರಂತೆ ಮಣಿಪಾಲ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರು. ನಂತರದ ತನಿಖೆಯಲ್ಲಿ ಪದ್ಮಾಬಾಯಿ ಅವರನ್ನು ಅವರ ಮಗ ಈಶ ನಾಯ್ಕ್ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಅದರಂತೆ ಪೊಲೀಸರು ಆರೋಪಿ ಈಶ ನಾಯಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…