15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ -2025′-ಬೃಹತ್ ಉದ್ಯೋಗ ಮೇಳವು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಕಾಲೇಜಿನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಮೋಹನ್ ಆಳ್ವ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉದ್ಯೋಗ ಮೇಳವನ್ನು 2007 ರಿಂದಲೇ ನಡೆಸಿಕೊಂಡು ಬರಲಾಗುತ್ತಿದ್ದು ಇದರಿಂದ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಉದ್ಯೋಗವನ್ನು ಪಡೆದುಕೊಂಡಿದ್ದಾರೆ . ಮುಖ್ಯವಾಗಿ ಈ ಮೇಳವು ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಉದ್ಯೋಗ ಅವಕಾಶ ಕೊಡಿಸುವ ಮಹತ್ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದೆ. ಸಂಸ್ಥೆಯು ಈವರೆಗೆ ದೇಶದ ವಿವಿಧ ಭಾಗಗಳಲ್ಲಿ 21 ಬೃಹತ್ ಉದ್ಯೋಗ ಮೇಳಗಳನ್ನು ಬಹಳ ವ್ಯವಸ್ಥಿತವಾಗಿ ನಡೆಸಿದೆ. ಪ್ರತೀ ಉದ್ಯೋಗ ಮೇಳದಲ್ಲಿ ಸರಾಸರಿ 200ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿವರೆಗೆ ಒಟ್ಟು 36,151 ಉದ್ಯೋಗಗಳನ್ನು 61,517 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ಲಿಸ್ಟ್ ಆಯ್ಕೆಗೆ ಅರ್ಹರಾಗಿದ್ದಾರೆ. ಈ ಭಾರಿಯ ಬೃಹತ್ ಉದ್ಯೋಗ ಮೇಳದಲ್ಲಿ ವಿವಿಧ ದೇಶಿಯ ಮತ್ತು ವಿದೇಶಿ ಕಂಪೆನಿಗಳು ಭಾಗವಹಿಸುತ್ತಿದೆ. ಬ್ಯಾಂಕಿAಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಟರಿಂಗ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದಿದ್ದಾರೆ.



