ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 399 ಗ್ರಾಮ ಪಂಚಾಯತ್ ಕಛೇರಿಗಳ ಎದುರು ಏಕಕಾಲದಲ್ಲಿ ಪ್ರತಿಭಟನೆ ನಡೆದಿದೆ.

ಇದರ ಹಿನ್ನೆಲೆ ನೀರು ಮಾರ್ಗ ಗ್ರಾಮ ಪಂಚಾಯತ್ ಕಚೇರಿ ಮುಂಭಾಗವೂ ಪ್ರತಿಭಟನೆ ಜೋರಾಗಿತ್ತು. ಪ್ರತಿಭಟನೆ ಬಳಿಕ ಹಲವಾರು ಸಮಸ್ಯೆಗಳ ವಿಚಾರದ ಬಗ್ಗೆ ನೀರುಮಾರ್ಗ ಗ್ರಾಮ ಪಂಚಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಮನವಿ ನೀಡಲಾಯಿತು. ಇನ್ನು ಈ ಪ್ರತಿಭಟನೆಯಲ್ಲಿ ಸಂದಿಪ್ ಪ್ರಧಾನ ಕಾರ್ಯದರ್ಶಿ, ಮಂಗಳೂರು ನಗರ ಉತ್ತರ ಮಂಡಲ, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಭಾಗಿಯಾದ್ರು.



