ಸೌಹಾರ್ದ ಸಹಕಾರಿ ಕ್ಷೇತ್ರ ಸಹಕಾರ ಚಳುವಳಿಗೆ ಹೊಸ ಚೈತನ್ಯವನ್ನು ನೀಡಿದೆ. ರಾಜ್ಯದಲ್ಲಿ 6514 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೊಂದಾಯಿಸಿಕೊಂಡಿದ್ದಾರೆ.

ರಾಜ್ಯದ ಸೌಹಾರ್ದ ಸಹಕಾರಿಗಳಲ್ಲಿ 1683ಕ್ಕೂ ಹೆಚ್ಚು ಇ-ಸ್ಟ್ಯಾಂಪಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಬೊಕ್ಕಸಕ್ಕೆ ಪ್ರತಿದಿನ 2 ಕೋಟಿಗೂ ಹೆಚ್ಚು ರಾಜಸ್ವವನ್ನು ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ಅಧ್ಯಕ್ಷ ಜಿ. ನಂಜನಗೌಡ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ 72 ಲಕ್ಷಕ್ಕೂ ಹೆಚ್ಚು ಸದಸ್ಯರು ತೊಡಗಿಸಿಕೊಂಡಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. ರೂ. 1630 ಕೋಟಿ ಪಾಲು ಬಂಡವಾಳ, ರೂ. 44,793 ಕೋಟಿ ಠೇವಣಿ, ರೂ. 3,992 ಕೋಟಿ ನಿಧಿಗಳು, ರೂ. 35,747 ಕೋಟಿ ಸಾಲ, ರೂ. 51.064 ಕೋಟಿ ದುಡಿಯುವ ಬಂಡವಾಳ ಹಾಗೂ ರೂ. 735 ಕೋಟಿ ಲಾಭ ಈ ಕ್ಷೇತ್ರದ ಹೆಗ್ಗಳಿಕೆಯಾಗಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಮಂಜುನಾಥ, ಭಾರತಿ ಜಿ ಭಟ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ ಪಾಟೀಲ, ಜಿಲ್ಲಾಧ್ಯಕ್ಷ ಭಾಸ್ಕರ್ ಕಾಮತ್, ಜಗನ್ನಾಥ್ ಶೆಟ್ಟಿ ಉಪಸ್ಥಿತರಿದ್ರು.



