ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ರಾಜ್ಯದ ಬೊಕ್ಕಸಕ್ಕೆ ಪ್ರತಿದಿನ 2ಕೋಟಿಗೂ ಹೆಚ್ಚು ರಾಜಸ್ವ”; ಜಿ.ನಂಜನಗೌಡ

ಸೌಹಾರ್ದ ಸಹಕಾರಿ ಕ್ಷೇತ್ರ ಸಹಕಾರ ಚಳುವಳಿಗೆ ಹೊಸ ಚೈತನ್ಯವನ್ನು ನೀಡಿದೆ. ರಾಜ್ಯದಲ್ಲಿ 6514 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ನೊಂದಾಯಿಸಿಕೊಂಡಿದ್ದಾರೆ.

ರಾಜ್ಯದ ಸೌಹಾರ್ದ ಸಹಕಾರಿಗಳಲ್ಲಿ 1683ಕ್ಕೂ ಹೆಚ್ಚು ಇ-ಸ್ಟ್ಯಾಂಪಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಬೊಕ್ಕಸಕ್ಕೆ ಪ್ರತಿದಿನ 2 ಕೋಟಿಗೂ ಹೆಚ್ಚು ರಾಜಸ್ವವನ್ನು ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ಇದರ ಅಧ್ಯಕ್ಷ ಜಿ. ನಂಜನಗೌಡ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ 72 ಲಕ್ಷಕ್ಕೂ ಹೆಚ್ಚು ಸದಸ್ಯರು ತೊಡಗಿಸಿಕೊಂಡಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. ರೂ. 1630 ಕೋಟಿ ಪಾಲು ಬಂಡವಾಳ, ರೂ. 44,793 ಕೋಟಿ ಠೇವಣಿ, ರೂ. 3,992 ಕೋಟಿ ನಿಧಿಗಳು, ರೂ. 35,747 ಕೋಟಿ ಸಾಲ, ರೂ. 51.064 ಕೋಟಿ ದುಡಿಯುವ ಬಂಡವಾಳ ಹಾಗೂ ರೂ. 735 ಕೋಟಿ ಲಾಭ ಈ ಕ್ಷೇತ್ರದ ಹೆಗ್ಗಳಿಕೆಯಾಗಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಮಂಜುನಾಥ, ಭಾರತಿ ಜಿ ಭಟ್, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ ಪಾಟೀಲ, ಜಿಲ್ಲಾಧ್ಯಕ್ಷ ಭಾಸ್ಕರ್ ಕಾಮತ್, ಜಗನ್ನಾಥ್ ಶೆಟ್ಟಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!