ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಕೇಪು ಗ್ರಾಮ ಪಂಚಾಯತ್ ಕಛೇರಿ ಎದುರುಗಡೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾನಾಡಿದ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪಂಚಾಯತ್ ವ್ಯವಸ್ಥೆಯನ್ನು ಬುಡಮೇಲುಗೊಳಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಹಾಗೂ ಪಂಚಾಯತಿಗೆ ನೀಡುವ ಕೆಲವೊಂದು ಸವಲತ್ತುಗಳನ್ನು ಕಡಿತಗೊಳಿಸುವ ಮೂಲಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ರಾಜ್ಯ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಇರಾನ್ ಮತ್ತು ಇಸ್ರೇಲ್ ಯುದ್ಧದ ಬಗ್ಗೆ ಚಿಂತಿತರಾಗಿದ್ದಾರೆ ಎಂದು ಹೇಳಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ಧನ್ ಭಟ್ ಮಾತಾಡಿ ಸರಕಾರ ಜನಸಾಮಾನ್ಯರಿಗೆ ಸಹಕಾರ ನೀಡುವುದನ್ನು ಬಿಟ್ಟು ದ್ರೋಹವನ್ನು ಮಾಡುತ್ತಿದೆ. ಕೇಪು ಗ್ರಾಮ ಪಂಚಾಯತು ಅಧ್ಯಕ್ಷರಾದ ರಾಘವ ಮಣಿಯಾಣಿ ಮಾತಾನಾಡಿ, ಪಂಚಾಯತಿಗೆ ಈ ಹಿಂದೆ ಬಿಜೆಪಿ ಸರಕಾರ ನೀಡುತ್ತಿದ್ದ ಆಶ್ರಯ ಯೋಜನೆಯ ಮನೆ, ಪ್ರಾಕೃತಿಕ ವಿಕೋಪ ಸಂಭವಿಸಿದಾಗ ನೀಡುವ ಪರಿಹಾರವನ್ನು ಕಡಿತಗೊಳಿಸಲಾಗಿದೆ ಹಾಗೂ ಸಿಬ್ಬಂದಿಗಳಿಗೂ ವೇತನ ನೀಡಲು ಈ ಸರಕಾರದಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…