ಸಜಿಪನಡು ಗ್ರಾಮದ ದೇರಾಜೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮತ್ತೊಂದು ಆನ್ ಲೈನ್ ನ್ಯೂಸ್ ವೆಬ್ ಪೋರ್ಟಲ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಡಿನಾಡ ಧ್ವನಿ. ಆನ್ ಲೈನ್ ಎಂಬ ವೆಬ್ ನ್ಯೂಸ್ ಚಾನಲ್ ವೊಂದರಲ್ಲಿ ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯ ಬೀತಿಯನ್ನುಂಟು ಮಾಡಿದ ವೆಬ್ ನ್ಯೂಸ್ ಚಾನಲ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂನ್ 24 ರಂದು ಅಪರಾಧ ಕ್ರಮಾಂಕ 80/2025, ಕಲಂ 240 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುಳ್ಳು ಸುದ್ದಿ ಪ್ರಸಾರ ಮಾಡುವವರ ವಿರುದ್ದ ಮುಂದಿನ ದಿನಗಳಲ್ಲೂ ಕಾನೂನು ಕ್ರಮ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾ ವರಿಷ್ಠಾಧಿಕಾರಿ ಕೆ ಅರುಣ್ ಅವರು ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರದ ಆರೋಪದಲ್ಲಿ ಜೂನ್ 21ರಂದು ಡಿ ಟಿವಿ ಕನ್ನಡ ಎಂಬ ನ್ಯೂಸ್ ಚಾನಲ್ ಲಿಂಕ್ ವಿರುದ್ದವೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…