ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ಎನ್‌ಐಎ ಕಸ್ಟಡಿಗೆ ನೀಡಿದೆ.
ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್ಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಲಾಗಿತ್ತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…