ಓದಿನಲ್ಲಿ ವಿಪರೀತ ಒತ್ತಡಕ್ಕೊಳಗಾಗಿ, ತಲೆನೋವಿನಿಂದ ಬಳಲುತ್ತಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.
ಮಂಗಳೂರು ಬೆಂದೂರ್ ವೆಲ್ ನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಸಾಲಿನ ಬಿಎ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿ ಶ್ರೇಯಾ ಆತ್ಮಹತ್ಯೆಗೈದ ವಿದ್ಯಾರ್ಥಿನಿಯಾಗಿದ್ದಾರೆ. ತಲಪಾಡಿ ನಾರ್ಲ ನಿವಾಸಿಯಾದ ಶ್ರೇಯಾ, ತಾಯಿ ಪುಷ್ಪಲತಾ ಅವರು ದೇವಿಪುರದ ಶಾರದಾ ವಿದ್ಯಾಲಯದಲ್ಲಿ ಅಟೆಂಡರ್ ಕೆಲಸದಲ್ಲಿದ್ದು ಸಂಸ್ಥೆಯ ವಸತಿ ಗೃಹದಲ್ಲೇ ಗಂಡ ಮತ್ತು ಮಕ್ಕಳ ಜೊತೆಯಲ್ಲಿ ನೆಲೆಸಿದ್ರು. ಶ್ರೇಯಾ ಎಂದಿನಂತೆ ಬೆಳಗ್ಗೆಯೂ ಕಾಲೇಜಿಗೆ ತೆರಳಿ, ಸಂಜೆ ಶ್ರೇಯಾ ತಂಗಿ ಶಾಲೆ ಮುಗಿಸಿ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ನೋಡಿದಾಗ ಮನೆಯ ಬೆಡ್ ರೂಂನ ಕಿಟಕಿಗೆ ಶ್ರೇಯ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಸಾವಿಗೂ ಮುನ್ನ ಶ್ರೇಯಾ ಬರೆದಿರುವ ಡೆತ್ ನೋಟ್ ಪೊಲೀಸರಿಗೆ ದೊರೆತಿದ್ದು, ಓದಿನಲ್ಲಿ ಕಳೆದ ಎರಡು ತಿಂಗಳಿನಿಂದ ವಿಪರೀತ ಒತ್ತಡ ಎದುರಿಸುತ್ತಿದ್ದು, ಸಹಿಸದ ತಲೆ ನೋವಿನಿಂದ ಬಳುತ್ತಿದ್ದೇನೆಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…