ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆಯನ್ನು ತುರ್ತು ನಿರ್ಮಾಣ ಮಾಡುವ ಕುರಿತು ಕಾರ್ಯಸಾಮರ್ಥ್ಯದ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯಿಂದ ನಡೆಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಪ್ರಕೃತಿ ವಿಕೋಪ ಯೋಜನೆಯಡಿ ಹೊಸದಾಗಿ ಸೇತುವೆ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಅವರಿಗೆ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಒತ್ತಾಯಿಸಿದ್ದಾರೆ.
ಈಗಿರುವ ಸೇತುವೆ ಶಿಥಿಲಗೊಂಡಿದ್ದು ಹದಗೆಟ್ಟಿರುವ ಮಣ್ಣಿನ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಓಡಾಡಬೇಕು. ಮಳೆಗಾಲದಲ್ಲಿ ನದಿ ತುಂಬಿ ತುಳುಕುವ ಜತೆಯಲ್ಲಿ ಸೇತುವೆಯ ಮೇಲ್ಬಾಗದಲ್ಲೂ ನೀರು ಹರಿಯುವ ಸನ್ನಿವೇಶ ಸೃಷ್ಟಿಯಾಗುತ್ತಿದ್ದು, ಜನರು ಜೀವ ಭಯದಲ್ಲೇ ಓಡಾಡಬೇಕಾಗುತ್ತದೆ. ಹೊಸಂಗಡಿ ಮೂಲಕ ಭಾಗೀಮನೆ ತೊಂಬಟ್ಟು ಸಂಪರ್ಕದ ಕಬ್ಬಿನಾಲೆ-ಇರ್ಕಿಗದ್ದೆ-ಮೂಡುಕಂಪ-ಶೇಡಿಗದ್ದೆ- ಮಾವಿನಕೊಂಬೆ ಪ್ರದೇಶದ 250 ಮಿಕ್ಕಿ ಮನೆಗಳಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಮತ್ತು ಸೇತುವೆ ಇದಾಗಿದೆ. ಮಳೆಗಾಲ ಬಂತೆಂದರೆ ಆ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳು, ನಿತ್ಯ ಕಚೇರಿ ಕೆಲಸ ಕಾರ್ಯಗಳಿಗೆ ತೆರಳುವ ಜನತೆಗೆ ಪೇಟೆ ಪಟ್ಟಣಗಳನ್ನು ತಲುಪಬೇಕಾದರೆ ಆಮಾಸೆಬೈಲ್ ಮೂಲಕ ಸುತ್ತುವರಿದು ಸಂಚರಿಸಬೇಕಾಗಿದೆ. ವರ್ಷಂಪ್ರತಿ ಸ್ಥಳೀಯರಿಂದ ಶ್ರಮದಾನದ ಮೂಲಕ ತಾತ್ಕಾಲಿಕವಾಗಿ ರಸ್ತೆಯನ್ನು ಸರಿಪಡಿಸಿ ಕೊಂಡು ಸಂಚಾರ ವ್ಯವಸ್ಥೆ ಮಾಡಲಾಗುತ್ತಿದೆ. ವಿಪರೀತ ಮಳೆ ಸಂದರ್ಭ ಸೇತುವೆಗೆ ಸಮನಾಗಿ ಮಳೆ ನೀರು ಹರಿದು ಹೋಗುವ ಕಾರಣ ಅಲ್ಲಿನ ಜನತೆ ಸಂಪರ್ಕದ ಕಡಿತದ ಭೀತಿಯನ್ನೂ ಎದುರಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅವರು ತಕ್ಷಣವೇ ಗ್ರಾಮಸ್ಥರ ರಕ್ಷಣೆಗೆ ಬೇಕಾದ ಅಗತ್ಯ ವ್ಯವಸ್ಥೆ ಕಲ್ಪಿಸುವ ಜೊತೆಗೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ ಭಂಡಾರಿ ಅವರು ಕೋರಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…