ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ.
ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ತೊಗರಿ ಬೇಳೆ, ಕಾಫಿ ಪುಡಿ, ಅಡುಗೆ ಎಣ್ಣೆ, ಚಹಾ ಪುಡಿ ಮುಂತಾದ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲಗಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರತಿಯೊಂದು ಯೋಜನೆಯೂ ಅನುಕರಣೀಯವಾಗಿದೆ. ಪಡಿತರ ಜೊತೆಗೆ ನೀಡುತ್ತಿರುವ ಅಕ್ಕಿಯು ಕಾಳ ಸಂತೆಯಲ್ಲಿ ದುರುಪಯೋಗ ಆಗುತ್ತಿರುವುದನ್ನು ತಪ್ಪಿಸಲು “ಇಂದಿರಾ ಕಿಟ್” ಯೋಜನೆಯನ್ನು ಜಾರಿಗೊಳಿಸಿರುವುದು ಶ್ಲಾಘನೀಯ, ಸರ್ಕಾರದ ಯಾವುದೇ ಯೋಜನೆಗಳು ದುರುಪಯೋಗವಾಗದೇ ಅರ್ಹ ಫಲಾನುಭವಿಗಳಿಗೆ ಸಲ್ಲಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…