ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ ಸಲುಹಿದ ತಂದೆ-ತಾಯಿಗಳ ಪ್ರೀತಿ, ಆತಂಕ, ಕಾಳಜಿಯೇ ಮಕ್ಕಳಿಗೆ ಅರ್ಥವಾಗುತ್ತಿಲ್ಲ. ಹೈದರಾಬಾದ್ ನಲ್ಲಿ 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಭೀಕರ ಘಟನೆ ನಡೆದಿದೆ.
ತನ್ನ 19 ವರ್ಷದ ಬಾಯ್ ಫ್ರೆಂಡ್ ಹಾಗೂ ಆತನ ಕಿರಿಯ ಸೋದರನ ಜೊತೆ ಸೇರಿಕೊಂಡು ತಾಯಿಯನ್ನು ಮಗಳು ಮುಗಿಸಿದ್ದಾಳೆ. ಹೈದರಾಬಾದ್‌ನ ಜೆಡಿಮೆಟ್ಲಾ ಪ್ರದೇಶದ ಎನ್‌ಎಲ್‌ಬಿ ನಗರದಲ್ಲಿ ಈ ಅಘಾತಕಾರಿ ಘಟನೆ ನಡೆದಿದೆ. ಹತ್ತನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ 8 ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ 19 ವರ್ಷದ ಯುವಕನ ಪರಿಚಯವಾಗಿದೆ. ಬಳಿಕ ಆತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಈ ವಿಷಯ ಯುವತಿಯ ತಾಯಿಗೆ ಗೊತ್ತಾಗಿದೆ. ತಾಯಿ, ಅಪ್ರಾಪ್ತ ಮಗಳು ಯುವಕನ ಜೊತೆ ಸಂಬಂಧ ಬೆಳೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಮನೆಯಲ್ಲಿ ತಾಯಿ- ಮಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇನ್ನು ಇದೇ ವಿಷಯಕ್ಕೆ ಜೂನ್ 23 ರಂದು ಅಪ್ರಾಪ್ತ ವಿದ್ಯಾರ್ಥಿನಿ ತನ್ನ ತಾಯಿ ಅಂಜಲಿಯನ್ನು ಮುಗಿಸಿದ್ದಾಳೆ. ಈ ವೇಳೆ ಬಾಯ್ ಫ್ರೆಂಡ್ ಹಾಗೂ ಆತನ ಸೋದರ ಕೂಡ ಮನೆಯಲ್ಲಿದ್ದು ಮಹಿಳೆಯ ಕುತ್ತಿಗೆ ಹಿಸುಕಿದ್ದಾರೆ. ಬಳಿಕ ಐರನ್ ರಾಡ್ ನಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಅಂಜಲಿಗೆ ಇರಿದಿದ್ದಾರೆ. ಹೈದರಾಬಾದ್‌ನ ಜೆಡಿಮೆಟ್ಲಾ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ತಾಯಿಯೇ ತನ್ನ ಜೀವ ಕಳೆದುಕೊಂಡಿದ್ದಾಳೆ. ಇದಕ್ಕಿಂತ ದಾರುಣ ಕೃತ್ಯ ಮತ್ತೊಂದಿಲ್ಲ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…