ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ. ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.

ಜೂನ್ 25 ರಂದು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಇಕ್ಸಿಯೋಂ ನೌಕೆಯನ್ನು ಹೊತ್ತು ಫಾಲ್ಕನ್ 9 ರಾಕೆಟ್ ನಭಕ್ಕೆ ಯಶಸ್ವಿಯಾಗಿ ಜಿಗಿದಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಕೂಡ ಪ್ರಯಾಣ ಬೆಳೆಸಿದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್‌ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.

ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗವನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.



