ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ; ಪ್ರವಾಸಿ ತಾಣಗಳಿಗೆ ನಿರ್ಬಂಧ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧವನ್ನು ಹಾಕಲಾಗಿದೆ. ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಂಚಿಗೆ ತಲುಪಿದ್ದು 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕಾವೇರಿ ನದಿಯಿಂದ 29 ಸಾವಿರ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿ ಬರುತ್ತಿದ್ದು ಇದರಿಂದ ಜಲಾಶಯವು 121 ಅಡಿ ಭರ್ತಿಯಾಗಿದೆ.

ಇನ್ನು ಗಂಟೆ ಗಂಟೆಗೂ ಒಳ ಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇನ್ನು ದಿನದಿಂದ ದಿನಕ್ಕೆ ನೀರಿನ ಮಟ್ಟ 50 ಕ್ಯೂಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಇರುವುದರಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ನದಿ ಪಾತ್ರದಲ್ಲಿ ಬರುವ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿಯವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!