ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧವನ್ನು ಹಾಕಲಾಗಿದೆ. ಕೆಆರ್‌ಎಸ್ ಡ್ಯಾಂ ಈಗಾಗಲೇ ಭರ್ತಿಯಂಚಿಗೆ ತಲುಪಿದ್ದು 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕಾವೇರಿ ನದಿಯಿಂದ 29 ಸಾವಿರ ಕ್ಯೂಸೆಕ್ ನೀರನ್ನು ರಿಲೀಸ್ ಮಾಡಲಾಗಿದೆ. ಪ್ರವಾಹ ಭೀತಿ ಎದುರಾಗುವ ಹಿನ್ನೆಲೆಯಲ್ಲಿ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿ ಬರುತ್ತಿದ್ದು ಇದರಿಂದ ಜಲಾಶಯವು 121 ಅಡಿ ಭರ್ತಿಯಾಗಿದೆ.
ಇನ್ನು ಗಂಟೆ ಗಂಟೆಗೂ ಒಳ ಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇನ್ನು ದಿನದಿಂದ ದಿನಕ್ಕೆ ನೀರಿನ ಮಟ್ಟ 50 ಕ್ಯೂಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಇರುವುದರಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ನದಿ ಪಾತ್ರದಲ್ಲಿ ಬರುವ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀರಂಗಪಟ್ಟಣದ ತಹಶೀಲ್ದಾರ್ ಪರಶುರಾಮ ಸತ್ತಿಗೇರಿಯವರು ಆದೇಶ ಹೊರಡಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…