ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೈ ಅಲರ್ಟ್ ಘೋಷಿಸಿದೆ
ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಇದೀಗ ದೇಶಾದ್ಯಂತ ಹವಾಮಾನ ವೈಪರಿತ್ಯ ಉಂಟಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಮುನ್ಸೂಚನೆ ಇದ್ದು, ಸುಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿ ಆಗಾಗ ಮಳೆಯಾಗುತ್ತಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸಾರ್ವಜನಿಕರು ನದಿ ದಡಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.



