ಪುತ್ತೂರು – ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್‌ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿ0ದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಆರಂಭದಲ್ಲಿ 6 ಬಸ್‌ಗಳು ಸಂಚಾರ ನಡೆಸಲಿವೆ. ನಾನ್‌ಸ್ಟಾಪ್ ಬಸ್ ಸೇವೆಯಿಂದ ಪುತ್ತೂರಿನಿಂದ ಒಂದು ಗಂಟೆಯಲ್ಲಿ ಮಂಗಳೂರು ತಲುಪಲು ಸಾಧ್ಯ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇನ್ನು ಸಭೆಯಲ್ಲಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಹೊಸ ಪೂಜಾರಿ, ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಾಂತ್, ಡಿಪೋ ಮ್ಯಾನೆಜರ್ ಸುಬ್ರಹ್ಮಣ್ಯ ಪ್ರಸಾದ ಉಪಸ್ಥಿತರಿದ್ದರು.



