ಪುತ್ತೂರಿನ ಹೊರವಲಯದ ಬನ್ನೂರು ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಬಗ್ಗೆ ನೀಡಿದ ದೂರಿಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬನ್ನೂರು ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಕುರಿತು ಬನ್ನೂರು ಸಂತ ಅಂತೋಣಿ ಚರ್ಚ್ ನ ಧರ್ಮಗುರು ಫಾ.ಬಾಲ್ತಿಜಾರ್ ಪಿಂಟೋ ಅವರು ಪೊಲೀಸರಿಗೆ ಜೂ.14 ರಂದು ದೂರು ನೀಡಿದ್ದರು. ದೂರು ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ರಿ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…