ಮಕ್ಕಳು ಎಂದರೆ ತಾಯಿಯಂದರಿಗೆ ಎಲ್ಲಿಲ್ಲದ ಪ್ರೀತಿ ಆದರೆ ಇಲ್ಲೊಬ್ಬ ಪಾಪಿ ತನ್ನ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಜೂನ್ 26 ರ ಮುಂಜಾನೆ ನಡೆದಿದೆ.
ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ನೆರೆಮನೆಯ ಲೋಲಿಟಾ ಈ ಕೃತ್ಯದಿಂದ (30) ಗಂಭೀರ ಗಾಯಗೊಂಡಿದ್ದಾರೆ. ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಗೆ ಹುಷಾರಿಲ್ಲ ಎಂದು ನೆರೆಮನೆಯ ಲೋಲಿಟಾರವರನ್ನು ಮನೆಗೆ ಕರೆಸಿದ್ದಾನೆ ಎನ್ನಲಾಗಿದೆ. ತಾಯಿ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇನ್ನೋರ್ವ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗ ದಲ್ಲಿದ್ದಾರೆ. ಕೃತಕ್ಕೆ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಮೃತದೇಹ ಮನೆ ಸಮೀಪದ ಪೊದೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…