ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್‌ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್‌ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್‌ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ.
ಇಂದು ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ, ಗಿರಿಧರ್ ಯಾದವ್ ಅವರು ರಾಜ್ಯಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…