ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಿಜೆಪಿ ಕಾರ್ಯಕರ್ತ ನಿಧನ..??!!

ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ, ಸಾಮಾಜಿಕ ಧಾರ್ಮಿಕ ಮುಂದಾಳು ರಾಜೇಶ್ ಕುಲಾಲ್ ಕುಕ್ಕಾಜೆ ಅವರು ಜ್ವರದಿಂದ ನಿಧನರಾಗಿದ್ದಾರೆ. ಅವರು ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 25 ರಂದು ಬುಧವಾರ ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಐಸಿಯು ಘಟಕದಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜೇಶ್ ಕುಲಾಲ್ ಅವರು ಕುಕ್ಕಾಜೆ ಯುವಕ ಮಂಡಲದ ,ಸಿದ್ದಿವಿನಾಯಕ ಮಂದಿರ ಕುಕ್ಕಾಜೆ ಇಲ್ಲಿ ಸಕ್ರೀಯಾಗಿದ್ರು. ಇದರ ಕುಕ್ಕಾಜೆ ಬಿಜೆಪಿ ಬೂತ್ ಸಮಿತಿ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕವಾಗಿ ಸಕ್ರಿಯರಾಗಿದ್ದ ಇವರು ಬಿಸ್ಕೆಟ್ ಕಂಪೆನಿಯೊ0ದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ರು. ಇವರಿಗೆ ಇಬ್ಬರು ಸಣ್ಣ ಪ್ರಾಯದ ಹೆಣ್ಣು ಮಕ್ಕಳಿದ್ದಾರೆ. ತಾಯಿ, ಪತ್ನಿ, ತಂಗಿ ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!