ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 180 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 190 ರನ್‌ಗಳಿಸುವುದರ ಜೊತೆ ಭರ್ಜರಿ ಜಯ ಸಾಧಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಅಧ್ಧೂರಿ ಪ್ರದರ್ಶನ ನೀಡಿದ್ದಾರೆ.
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಟ್ರಾವಿಸ್ ಹೆಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 59 ರನ್ ಬಾರಿಸಿದ್ದ ಹೆಡ್, ದ್ವಿತೀಯ ಇನಿಂಗ್ಸ್ನಲ್ಲಿ 61 ರನ್ ಕಲೆಹಾಕಿದ್ದರು. ಈ ಎರಡು ಅರ್ಧಶತಕಗಳೊಂದಿಗೆ ಟ್ರಾವಿಸ್ ಹೆಡ್ ಆಸ್ಟ್ರೇಲಿಯಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಈ ಗೆಲುವಿನೊಂದಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಹೆಡ್ ಪಾಲಾಯಿತು. ವಿಶೇಷ ಎಂದರೆ ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಟ್ರಾವಿಸ್ ಹೆಡ್ ಅವರ 10ನೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಆಗಿತ್ತು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಅತ್ಯಧಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ.
ಹೆಡ್ ಅವರನ್ನು ಹೊರತುಪಡಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಯಾವುದೇ ಬ್ಯಾಟರ್ ಎರಡಂಕಿಯಷ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಬೆನ್ ಸ್ಟೋಕ್ಸ್. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಈವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ 5 ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಡಿದ 50 ಪಂದ್ಯಗಳಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಟ್ರಾವಿಸ್ ಹೆಡ್ ಇತಿಹಾಸ ನಿರ್ಮಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…