ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಈ ಮುಷ್ಕರವನ್ನು ಯಶಸ್ವಿಗೊಳಿಸಲು ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಬಿ.ಸಿ.ರೋಡ್ ನ ಡಾ. ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ರಾಜ್ಯ ಅಧ್ಯಕ್ಷರಾದ ಕಾಮ್ರೇಡ್ ಪಿ.ಪಿ ಅಪ್ಪಣ್ಣ ಮಾತನಾಡಿ, ಕೇಂದ್ರದ ಬಿ.ಜೆ.ಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಪೋರೇಟ್ ಧಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮೋದಿ ಸರಕಾರ ಕಾರ್ಮಿಕರ ಎಂಟು ಗಂಟೆಗಳ ಕೆಲಸದ ಹಕ್ಕನ್ನು ಕಿತ್ತುಹಾಕಿ ವಾರದಲ್ಲಿ ಎಪ್ಪತ್ತು ಗಂಟೆ ದುಡಿಯುವಂತೆ ಕಾಯ್ದೆಯ ಮೂಲಕ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದ್ದಾರೆ. ಇನ್ನು ಇದೆ ಸಂದರ್ಭ ಗಣ್ಯರು ಭಾಷಣ ಗೈದಿದ್ದಾರೆ.



