ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್‌ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ದ.ಕ.ಜಿಲ್ಲಾಡಳಿತ, ದ.ಕ.ಜಿ.ಪಂ.ಸ್ವಚ್ಛ ಭಾರತ್ ಮಿಷನ್,ಪುದು ಗ್ರಾ.ಪಂ., ಅಡ್ಯಾರ್ ಗ್ರಾ.ಪಂ. ಹಾಗೂ ಹಸಿರು ದಳ ಮಂಗಳೂರು ಆಶ್ರಯದಲ್ಲಿ ದ.ಕ.ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಮಾರ್ಗದರ್ಶನದಲ್ಲಿ ಹೆದ್ದಾರಿ ಬದಿಯ ತ್ಯಾಜ್ಯಗಳನ್ನು ತೆರವು ಮಾಡಲಾಯಿತು. ಎರಡು ಗ್ರಾ.ಪಂ.ತ0ಡದ ಜತೆಗೆ ಸ್ವಚ್ಛ ಭಾರತ್ ಮಿಷನ್ ತಂಡ, ಹಸಿರು ದಳದ ಕಾರ್ಯಕರ್ತರು, ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಅಭಿಯಾನದ ಭಾಗವಾಗಿ ಈಗಾಗಲೇ ಹಸಿರು ದಳದ ನೇತೃತ್ವದಲ್ಲಿ ವೇಸ್ಟ್ ಡಪ್ಪಿಂಗ್ ಸ್ಕ್ವಾಡ್ ರಚನೆಗೊಂಡು ಅದರ ತಂಡದ ಸದಸ್ಯರು ಹೆದ್ದಾರಿ ಬದಿ ಬೆಳಗ್ಗೆ ಹಾಗೂ ಸಂಜೆಯ ಹೊತ್ತು ನಿಂತು ತ್ಯಾಜ್ಯ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ತಂಡಗಳು, ಸ್ವಸಹಾಯ ಗುಂಪುಗಳ ಸದಸ್ಯರು, ಕಾಲೇಜುಗಳ ತಂಡಗಳು ಕೂಡ ಜಾಗೃತಿ ಕಾರ್ಯದಲ್ಲಿ ಭಾಗಿಯಾಗಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…