ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಜನತಾ ದಳ ಪಕ್ಷದಿಂದ ಪ್ರತಿಭಟನಾ ಸಭೆಯು ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಯಿತು.

ಜೆಡಿಎಸ್ ರಾಜ್ಯ ವಕ್ತಾರರಾದ ಎಂ ಬಿ ಸದಾಶಿವ ಮಾತನಾಡಿ, ಸರಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನಮ್ಮ ನಾಡಿನ ನೆಲ ಜಲ ಸಂಸ್ಕೃತಿ ಭಾಷೆ ಇವುಗಳನ್ನು ರಕ್ಷಿಸಬೇಕಾದ ಇಚ್ಛಾ ಶಕ್ತಿ ನಮ್ಮದಾಗಬೇಕು. ಅದರ ರಕ್ಷಣೆಗೆ ಜನತಾದಳ ಮುಂದಾಗಿದೆ. ಮುಂದಿನ ದಿನಗಳಲ್ಲಿ ಈ ಸರಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟವನ್ನು ರಾಜ್ಯದ ಗ್ರಾಮ ಗ್ರಾಮಗಳಲ್ಲಿ ಸಂಘಟಿಸಲಾಗುವುದೆಂದು ಸರಕಾರಕ್ಕೆ ಎಚ್ಚರಿಸಿದ್ರು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ರು.



