ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.
ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…