ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಬಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ. ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ ಕೆ ಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ.
ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…