ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ವತಿಯಿಂದ ಡಾ. ಬಿ.ಸಿ.ರಾಯ್ ಜನ್ಮದಿನ ಪ್ರಯುಕ್ತ ನಡೆದ ವೈದ್ಯರ ದಿನ ಕಾರ್ಯಕ್ರಮ ಆವಿಷ್ಕಾರ್ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಕುಟುಂಬ ವೈದ್ಯರುಗಳಾದ ಡಾ. ಎಂ. ನೀಲಯ್ಯ ಗಂಜೀಮಠ, ಡಾ. ರಾಮಚಂದ್ರ ಐತಾಳ್ ಹೆಬ್ರಿ, ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಬಳಿಕ ಕ್ಷೇಮ ನಿವೃತ್ತ ಮಕ್ಕಳ ತಜ್ಞೆ ಡಾ. ವಿಜಯ ಶೆಣೈ ಸನ್ಮಾನ ಸ್ವೀಕರಿಸಿ ಮಾತನಾಡಿ, ವೈದ್ಯಕೀಯ ವೃತ್ತಿಗೆ ಕಾಲಿಟ್ಟ ಬಳಿಕ ನಾವು ಎಷ್ಟು ಜ್ಞಾನವಂತರಾಗುತ್ತೇವೆ, ಕೌಶಲ್ಯ ವೃದ್ಧಿಸಿಕೊಂಡಿದ್ದೇವೆ ಎಂಬುದು ಎಷ್ಟು ಮುಖ್ಯವಾಗುತ್ತದೆಯೋ ಹಾಗೆಯೇ ನಮ್ಮನ್ನು ಸಾಕಿ ಬೆಳೆಸಿದ ಪೋಷಕರನ್ನು ಹಾಗೂ ಶಿಕ್ಷಣ ನೀಡಿದ ಸಂಸ್ಥೆಯ ಕೊಡುಗೆ ಯಾವುದೇ ಕಾಲಕ್ಕೂ ಮರೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ. ಎಂ. ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.



