ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾಗಡಿ ಗ್ರಾಮದಲ್ಲಿ ನಡೆದಿದೆ.

ಬೀದಿ ನಾಯಿಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಮುಳ್ಳಿನ ಪೊದೆಯಲ್ಲಿ ಜಿಂಕೆ ಸಿಲುಕಿಕೊಂಡಿತ್ತು. ಒದ್ದಾಡುತ್ತಿದ್ದ ಜಿಂಕೆಯನ್ನು ಕಂಡು ರಮೇಶ್ ಪೂಜಾರಿ ಹಾಗೂ ಸ್ಥಳೀಯರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿಂಕೆ ಸಾವನಪ್ಪಿದೆ. ಬೀದಿ ನಾಯಿಗಳು ಜಿಂಕೆಯನ್ನು ಅಟ್ಟಾಡಿಸಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.



