ಇತರೆ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಹದಿಹರೆಯದವರ ಸಮಸ್ಯೆಗಳು ಮತ್ತು ಪರಿಹಾರ’ ಕುರಿತು ಕಾರ್ಯಗಾರ.

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದವರ ಸಮಸ್ಯೆಗಳು ಮತ್ತು ಪರಿಹಾರ’ ಕುರಿತು ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಯೆನೆಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯರು ಹಾಗೂ ಮನೋವೈದ್ಯ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಜೇಶ್ ಎಂ ಮಾತನಾಡಿ, ಇಂದಿನ ಹದಿಹರೆಯದ ಸಮಸ್ಯೆಗಳ ಮೂಲ ಮೊಬೈಲ್ ಫೋನುಗಳಾಗಿದ್ದು, ಮಕ್ಕಳಿಗೆ ಮೊಬೈಲ್ ಮೇಲಿನ ಅತಿಯಾದ ದುರಾಸಕ್ತಿ ಅಥವಾ ಚಟ ಈ ಎಲ್ಲಾ ತೊಂದರೆಗಳ ಮೂಲವಾಗಿದೆ. ಸಣ್ಣ ಸಣ್ಣ ಮಕ್ಕಳು ಕೂಡ ಮೊಬೈಲ್ ಕಡೆಗೆ ಆಕರ್ಷಿತರಾಗಿ ತಮ್ಮ ಹದಿಹರೆಯದ ಅತ್ಯಂತ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.

ಮಕ್ಕಳನ್ನು ಟಿವಿ, ಮೊಬೈಲುಗಳಿಂದ ದೂರ ಇಡಲು ಇತರ ವಿಷಯಗಳಲ್ಲಿ ಆಸಕ್ತಿಯನ್ನು ಹೆಚ್ಚಿಸಬೇಕು. ಮುಖ್ಯವಾಗಿ ಸಾಮಾಜಿಕ ಜಾಲತಾಣಗಳನ್ನು ನಮ್ಮ ಜೀವನಕ್ಕೆ ಪೂರಕವಾಗಿ ಉಪಯೋಗಿಸಲು ನಾವು ಕಲಿಯಬೇಕಾಗಿದೆ. ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಹದಿಹರೆಯದಲ್ಲಿ ಸಾಮಾನ್ಯವಾಗಿ ಬರುವ ಖಿನ್ನತೆಯಿಂದ ಹೊರಬರಬಹುದು. ಈ ಮೂಲಕ ಮಾನಸಿಕವಾಗಿ ಸದೃಢವಾದ ಸಮಾಜವನ್ನು ಕಟ್ಟಬಹುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ಬಾಲ್ಯವಸ್ಥೆಯಿಂದ ಮನುಷ್ಯನ ಬೆಳವಣಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆಗಬೇಕಾಗಿದ್ದು, ಹಲವಾರು ಕಾರಣಗಳು ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮವನ್ನು ಉಂಟುಮಾಡುತ್ತವೆ.

ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ತೊಂದರೆಗಳು ಆಗುತ್ತಿದ್ದು, ಸೂಕ್ತ ವೈದ್ಯರ ಮೂಲಕ ಇವುಗಳನ್ನು ಸರಿಪಡಿಸಿಕೊಳ್ಳಬಹುದು. ಸೂಕ್ತ ಸಮಯದಲ್ಲಿ ಆಪ್ತ ಸಮಾಲೋಚನೆ ಭವಿಷ್ಯದ ಹಲವಾರು ತೊಂದರೆಗಳನ್ನು ನಿವಾರಿಸಬಹುದು ಎಂದು ಹೇಳಿದರು. ವೇದಿಕೆಯಲ್ಲಿ ಬಾಲ ರಕ್ಷಣಾ ಘಟಕದ ನಿರ್ದೇಶಕರಾದ ಡಾ. ಆಶಾ ಸಾವಿತ್ರಿ ಹಾಗೂ ರಾಮ್ ನಾಯ್ಕ್, ಡ್ಯೋರಾ ಐನಿಶ್ ರೆಬೆಲ್ಲೋ, ಪ್ರಾಧಿ ಕ್ಲಾರೆ ಪಿಂಟೋ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

2 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

2 days ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

2 days ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

2 days ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

3 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

3 days ago