ಜು. 2 ರಂದು ರಾತ್ರಿ ಮಲಗುವ ಕೊಠಡಿಯಿಂದ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.
ಕೋಟೆಕಾರು ಬೀರಿ ನಿವಾಸಿ ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಜು.2ರಂದು ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದನು ಈ ಕುರಿತು ತಂದೆಯವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಯ ಪ್ರಕರಣ ಎಂದು ತಿಳಿದು ಬಂದಿದ್ದು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಣಿಪಾಲ ಶಿಕ್ಷಣ ಸಂಸ್ಥೆಯೊ0ದರ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…