ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ, ಶಾಲಿನಿ ರಜನೀಶ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರ ರಾಜಿನಾಮೆಗೆ ಒತ್ತಾಯಿಸಿದ್ರು.



