ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಹಿಮಾನ್ & ಅಶ್ರಫ್ ಕೊಲೆ ಪ್ರಕರಣದ ನೈಜ ಆರೋಪಿಯನ್ನು ಬಂಧಿಸಿ; ಅನ್ವರ್ ಸಾದತ್ ಆಗ್ರಹ

ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಎಸ್‌ಸಿಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಅವರು ಮಾತನಾಡಿ, ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೈಜ್ಯ ಆರೋಪಿಯನ್ನು ಇದುವರೆಗೂ ಬಂಧಿಸಿಲ್ಲ. ಕುಟುಂಬಕ್ಕೆ ಪರಿಹಾರ ಧನವನ್ನು ಸರಕಾರ ನೀಡಿಲ್ಲ. ಈ ಪ್ರಕರಣದಲ್ಲಿ ಪಾತ್ರದಾರಿಗಳ ಬಂಧನ ಮಾತ್ರ ಆಗಿದೆ ಆದರೆ ಸೂತ್ರಧಾರಿಗಳ ಬಂಧನ ಆಗಿಲ್ಲ. ಅವರು ನಡೆಯುತ್ತಾ ಇದ್ದಾರೆ. ಕೂಡಲೇ ಅವರ ಬಂಧನ ಆಗಬೇಕು. ಸರಕಾರ ಮೃತ ಕುಟುಂಬಕ್ಕೆ ,50ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಮೊನೀಶ್ ಅಲಿ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!