ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಆರೋಪಿ ಶ್ರೀಕೃಷ್ಣ ಜೆ ರಾವ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.10ಕ್ಕೆ ಮುಂದೂಡಿಕೆ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಪುತ್ತೂರಿನ ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.10ಕ್ಕೆ ಮುಂದೂಡಿಕೆಯಾಗಿದೆ.

ಯುವತಿಗೆ ವಂಚನೆ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿರುವ ಆರೋಪಿ ಶ್ರೀಕೃಷ್ಣ ಜೆ. ರಾವ್ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜು.3ರಂದು ನಡೆದಿತ್ತು. ಸಂತ್ರಸ್ತ ಯುವತಿಯ ಪರವಾಗಿ ಆಕೆಯ ತಾಯಿ ನಮಿತಾರವರು ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹಾಜರಾದ್ರು. ಸಂತ್ರಸ್ತೆಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿತ್ತು. ಆದರೆ, ಆಕೆ ಮೂರು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆಯ ತಾಯಿ ನ್ಯಾಯಾಧೀಶರಿಗೆ ತಿಳಿಸಿದರಲ್ಲದೆ, ಆರೋಪಿಗೆ ನಿರೀಕ್ಷಣಾ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯ ತಾಯಿಯ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಸರಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಜು. 10ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!