ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್‌ಪೋರ್ಟ್ನಲ್ಲೇ ನಿಲ್ಲಿಸಲಾಯಿತು.
ಏರ್ ಇಂಡಿಯಾ ಪೈಲಟ್ ಅನಾರೋಗ್ಯದಿಂದಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ವಿಮಾನಕ್ಕೆ ಸ್ವಲ್ಪ ಅಡಚಣೆ ಉಂಟಾಯಿತು. ವಿಮಾನ ಟೇಕ್ ಆಫ್ ಆಗುವ ಕೆಲವೇ ಕ್ಷಣಗಳ ಮೊದಲು ಪೈಲಟ್ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೂಲಗಳ ಪ್ರಕಾರ, ಬೆಂಗಳೂರಿನಿಂದ ದೆಹಲಿಗೆ ಎ12414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು. ಇದಕ್ಕೆ ಏರ್ ಇಂಡಿಯಾ ವಿಮಾನವನ್ನು ಚಲಾಯಿಸಲು ಬದಲಿ ಪೈಲಟ್ ವ್ಯವಸ್ಥೆ ಮಾಡಿತು. ಈ ಅನಿರೀಕ್ಷಿತ ಘಟನೆಯಿಂದಾಗಿ, ಪ್ರಯಾಣಿಕರು ಸ್ವಲ್ಪ ತಡವಾಗಿ ದೆಹಲಿಯನ್ನು ತಲುಪಿದ್ದಾರೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ದೃಢಪಡಿಸಿದೆ. ಜುಲೈ 4ರ ಮುಂಜಾನೆ ನಮ್ಮ ಪೈಲಟ್‌ಗಳಲ್ಲಿ ಒಬ್ಬರಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಇತ್ತು. ಇದರ ಪರಿಣಾಮವಾಗಿ ಆ ಪೈಲಟ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಲು ಸಾಧ್ಯವಾಗದೆ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಏರ್ ಇಂಡಿಯಾ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪೈಲಟ್ ಈಗ ಸ್ಥಿರ ಸ್ಥಿತಿಯಲ್ಲಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…