ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌ0ಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ. ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…