ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ.
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…